ADVERTISEMENT

ಕೆ–ಸೆಟ್ ಅಧಿಸೂಚನೆ ಪ್ರಕಟ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2017, 19:30 IST
Last Updated 9 ಅಕ್ಟೋಬರ್ 2017, 19:30 IST

ಬೆಂಗಳೂರು: ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ–ಸೆಟ್‌) ಅಧಿಸೂಚನೆಯನ್ನು ಸೋಮವಾರ ಪ್ರಕಟಿಸಲಾಗಿದ್ದು, ಡಿಸೆಂಬರ್ 31ರಂದು ಪರೀಕ್ಷೆ ನಡೆಯಲಿದೆ.

ಮೈಸೂರು ವಿಶ್ವವಿದ್ಯಾಲಯ ಪರೀಕ್ಷೆಯನ್ನು ಆಯೋಜಿಸುತ್ತಿದೆ. ಈಬಾರಿ 39 ವಿಷಯಗಳಿಗೆ ಸಂಬಂಧಿಸಿದಂತೆ ಉಪನ್ಯಾಸಕರ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅರ್ಹತಾ ಪರೀಕ್ಷೆ ನಡೆಸಲಾಗುತ್ತಿದೆ.

ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಶೇ 55ರಷ್ಟು ಅಂಕ ಗಳಿಸಿರಬೇಕು. ಪರಿಶಿಷ್ಟ ಜಾತಿ, ಪಂಗಡ, ವಿವಿಧ ಹಿಂದುಳಿದ ವರ್ಗ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶೇ 50 ಅಂಕ ನಿಗದಿಪಡಿಸಲಾಗಿದೆ.

ADVERTISEMENT

ಬೆಂಗಳೂರು, ಬೆಳಗಾವಿ, ಬಳ್ಳಾರಿ, ವಿಜಯಪುರ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಪರೀಕ್ಷೆಗಳು ನಡೆಯಲಿವೆ. ಸಾಮಾನ್ಯ ಅಭ್ಯರ್ಥಿಗಳಿಗೆ ₹1,050, ಹಿಂದುಳಿದ ವರ್ಗ 2 ಎ, 2 ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ ₹850 ಹಾಗೂ ಪರಿಶಿಷ್ಟ ಜಾತಿ, ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ₹ 550 ಶುಲ್ಕ ನಿಗದಿಪಡಿಸಲಾಗಿದೆ. ವಿವರಗಳಿಗೆ ವೆಬ್‌ಸೈಟ್ (http://kset.uni-mysore.ac.in)ನೋಡಬಹುದು.

ಕೆ–ಸೆಟ್ ವೇಳಾಪಟ್ಟಿ:

* ಅ.9– ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ

* ಅ.31– ಅರ್ಜಿ ಸಲ್ಲಿಸಲು ಕೊನೆ ದಿನ

*ನ.7–  ₹150 ದಂಡ ಸಹಿತ ಅರ್ಜಿ ಸಲ್ಲಿಸಲು ಕೊನೆ ದಿನ

ನ.10– ಬ್ಯಾಂಕ್ ಚಲನ್‌ ಸೇರಿ ಅಗತ್ಯ ದಾಖಲೆಗಳೊಂದಿಗೆ ಮೂಲಪ್ರತಿಗಳನ್ನು ನೋಡಲ್ ಕೇಂದ್ರಗಳಿಗೆ ತಲುಪಿಸಲು ಅಂತಿಮ ದಿನ

ಡಿ.31– ಅರ್ಹತಾ ಪರೀಕ್ಷೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.