ಬೆಂಗಳೂರು: `ಹಳೇ ಪದ್ಯ ಕೇಳಿ ಕೇಳಿ ಸಾಕಾಗಿದೆ...~
ಹೀಗೆ ಉದ್ಗರಿಸಿದ್ದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಎಂ.ಕೃಷ್ಣ.
ಅರಣ್ಯ ಪ್ರದೇಶವನ್ನು ಗಣಿಗಾರಿಕೆಗೆ ಮುಕ್ತಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕೇಂದ್ರ ಉನ್ನತಾಧಿಕಾರ ಸಮಿತಿಗೆ (ಸಿಇಸಿ) ಇತ್ತೀಚೆಗೆ ಕೊಟ್ಟಿರುವ ವರದಿ ಕುರಿತು ಕೇಳಿದ ಪ್ರಶ್ನೆಗೆ ಈ ರೀತಿಯ ಪ್ರತಿಕ್ರಿಯೆ ನೀಡಿದರು.
ಇಲ್ಲಿನ ಪಂಚತಾರಾ ಹೋಟೆಲ್‌ನಲ್ಲಿ ಭಾರತ- ಜರ್ಮನಿ ದೇಶಗಳ ಸಂಬಂಧ ವೃದ್ಧಿಗೆ ಸಂಬಂಧಿಸಿದ ಸಮಾಲೋಚನಾ ಸಭೆಯಲ್ಲಿ ಶುಕ್ರವಾರ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.
`ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅರಣ್ಯ ಪ್ರದೇಶವನ್ನು ಗಣಿಗಾರಿಕೆಗೆ ಮುಕ್ತಗೊಳಿಸುವ ತೀರ್ಮಾನ ತೆಗೆದುಕೊಳ್ಳಲಾಯಿತು. ಅದು ನನ್ನ ನೇತೃತ್ವದ ಸಂಪುಟ ಸಭೆ ತೆಗೆದುಕೊಂಡ ನಿರ್ಧಾರ. ಅದು ಸರ್ಕಾರದ ನೀತಿ ಕೂಡ ಆಗಿತ್ತು. ಆಗ ತೆಗೆದುಕೊಂಡ ತೀರ್ಮಾನಕ್ಕೆ ಈಗಲೂ ಬದ್ಧ. ಪದೇ ಪದೇ ಆ ಬಗ್ಗೆ ಮಾತನಾಡುವುದರಲ್ಲಿ ಅರ್ಥ ಇಲ್ಲ~ ಎಂದು ಉತ್ತರಿಸಿದರು.
ರಾಜ್ಯ ರಾಜಕಾರಣಕ್ಕೆ ಬರುತ್ತೀರಾ ಎಂದು ಕೇಳಿದಾಗ, ನೇರ ಉತ್ತರ ನೀಡದ ಅವರು `ರಾಜ್ಯ ಕಾಂಗ್ರೆಸ್‌ನಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ಇಲ್ಲ. ಹತ್ತು ದಿನಗಳಿಂದ ಕ್ಯೂಬಾ, ಕೆನಡಾ ದೇಶಗಳಲ್ಲಿ ಪ್ರವಾಸದಲ್ಲಿದ್ದೆ~ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.