ADVERTISEMENT

ಕೊಡಗು ಜಿಲ್ಲೆಯಲ್ಲಿ ಮತ್ತೆ ಭಾರಿ ಮಳೆ: ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2018, 6:38 IST
Last Updated 14 ಜೂನ್ 2018, 6:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸತತವಾಗಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು ನಾನಾ ಕಡೆ ರಸ್ತೆ ಸಂಪರ್ಕ ಕಡಿತವಾಗಿದೆ.

ಗುರುವಾರ ಕೊಡಗಿನ ಎಲ್ಲ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕಾವೇರಿ ಹಾಗೂ ಲಕ್ಷ್ಮಣ ತೀರ್ಥ ನದಿಗಳು ತುಂಬಿ ಹರಿಯುತ್ತಿವೆ. ಪೊನ್ನಂಪೇಟೆ, ಬಾಳೆಲೆ, ನಾಪೋಕ್ಲು, ಭಾಗಮಂಡಲ, ಐಯ್ಯಂಗೇರಿಯಲ್ಲಿ ಸಾವಿರಾರು ಎಕರೆ ಜಮೀನು ಜಲಾವೃತಗೊಂಡಿದೆ.

ADVERTISEMENT

ಶೆಟ್ಟಿಗೇರಿ, ಶ್ರೀಮಂಗಲ ಹಾಗೂ ಕೊಟ್ಟಗೇರಿ, ಬಾಳೆಲೆ ಸೇತುವೆ ಮೇಲೆ ಲಕ್ಷ್ಮಣ ತೀರ್ಥ ನದಿ ನೀರು ಹರಿಯುತ್ತಿದೆ. ಈ ಮಾರ್ಗದಲ್ಲಿ ಕಳೆದೆರಡು ದಿನಗಳಿಂದ ವಾಹನ ಸಂಚಾರ ಸಾಧ್ಯವಾಗಿಲ್ಲ.

ಭಾಗಮಂಡಲ ಸಂಪೂರ್ಣ ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
*
ಕೊಡಗು ಜಿಲ್ಲೆ ಕುಶಾಲನಗರ ಸಮೀಪದ ಹಾರಂಗಿ ಜಲಾಶಯದ ಮಟ್ಟ (14 ಜೂನ್‌)

ಗರಿಷ್ಠ ಮಟ್ಟ: 2,859 ಅಡಿ (ಸಮುದ್ರ ಮಟ್ಟದಿಂದ)
ಇಂದಿನ ಮಟ್ಟ: 2,823.58 ಅಡಿ
ಒಳಹರಿವು : 3,663 ಕ್ಯುಸೆಕ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.