
ಪ್ರಜಾವಾಣಿ ವಾರ್ತೆಬೆಂಗಳೂರು: ಕೊಡವ ಸಾಹಿತ್ಯ ಅಕಾಡೆಮಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೊರಡಿಸಿದ್ದ ಆದೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಡೆ ನೀಡಿದ್ದಾರೆ.
ಕೆಲವರು ಆರ್‌ಎಸ್‌ಎಸ್ ಹಿನ್ನೆಲೆ ಹೊಂದಿದ್ದಾರೆ ಎಂದು ಮೈಸೂರು ಎಚ್. ವಿಶ್ವನಾಥ್ ಅವರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಈ ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅರೆಭಾಷೆ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಆದೇಶಕ್ಕೂ ಇದೇ ಕಾರಣದಿಂದ ತಡೆ ನೀಡಲಾಗಿದೆ ಎಂದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.