
ಬೆಂಗಳೂರು: ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವಾರ್ತಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಸಂತೋಷ್ ಲಾಡ್ ಅವರು ಶುಕ್ರವಾರ ರಾತ್ರಿ ರಾಜೀನಾಮೆ ಸಲ್ಲಿಸಿದರು.
ಸಂತೋಷ್ ಲಾಡ್ ಪಾಲುದಾರರಾಗಿರುವ ವಿ.ಎಸ್.ಲಾಡ್ ಅಂಡ್ ಸನ್ಸ್ ಗಣಿ ಕಂಪೆನಿಯು ಅಕ್ರಮ ಗಣಿಗಾರಿಕೆ ನಡೆಸಿದೆ ಎಂಬ ಆರೋಪ ಸುಮಾರು 40 ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಆರೋಪ–ಪ್ರತ್ಯಾರೋಪಕ್ಕೆ ನಾಂದಿ ಹಾಡಿತ್ತು. ಇಷ್ಟು ದಿನಗಳ ಕಾಲ ರಾಜೀನಾಮೆ ಪ್ರಸ್ತಾವವನ್ನು ಸ್ಪಷ್ಟವಾಗಿ ನಿರಾಕರಿಸಿಕೊಂಡು ಬಂದಿದ್ದ ಲಾಡ್, ದಿಢೀರ್ ನಿಲುವು ಬದಲಿಸಿ ಪದತ್ಯಾಗ ಮಾಡಿದರು.
ಇದಕ್ಕೂ ಮುನ್ನ ದೆಹಲಿ ಪ್ರವಾಸದಲ್ಲಿದ್ದ ಅವರು ಶುಕ್ರ ವಾರ ಮಧ್ಯಾಹ್ನ ಬೆಂಗಳೂರಿಗೆ ವಾಪಸಾದರು. ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿದರು. ನಂತರ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದರು.
* ಲಾಡ್ ರಾಜೀನಾಮೆ ಹಿಂದಿನ ಮರ್ಮ!
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.