ಬೆಂಗಳೂರು: ಇದೇ 26ರಂದು ನಡೆಯುವ ಕೊಪ್ಪಳ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಇಟ್ನಾಳ್ ಕಣಕ್ಕೆ ಇಳಿಯಲಿದ್ದಾರೆ.
ಶುಕ್ರವಾರ ಇಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಇಟ್ನಾಳ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. 2008ರಲ್ಲಿ ನಡೆದ ಚುನಾವಣೆಯಲ್ಲಿ ಬಸವರಾಜ ಇಟ್ನಾಳ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.