ಬೆಂಗಳೂರು: ಮುಂದಿನ ವರ್ಷ ಕೊಪ್ಪಳ ಜಿಲ್ಲೆಯಲ್ಲಿ 78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಆರ್.ಕೆ.ನಲ್ಲೂರು ಪ್ರಸಾದ್ ಅಧ್ಯಕ್ಷತೆಯಲ್ಲಿ ಶನಿವಾರ ಸಂಜೆ ನಡೆದ ಪರಿಷತ್ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕೋಲಾರ, ಬಳ್ಳಾರಿ, ಹಾವೇರಿ ಸೇರಿದಂತೆ ಅನೇಕ ಜಿಲ್ಲಾ ಘಟಕಗಳು 78ನೇ ಸಾಹಿತ್ಯ ಸಮ್ಮೇಳನ ಸಂಘಟಿಸಲು ಒಲವು ತೋರಿದ್ದವು. ಆದರೆ ಅಂತಿಮವಾಗಿ ಕೊಪ್ಪಳ ಜಿಲ್ಲೆಯಲ್ಲಿ ಸಮ್ಮೇಳನ ನಡೆಸಲು ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಕೊಪ್ಪಳ ಅಥವಾ ಆ ಜಿಲ್ಲೆಯಲ್ಲಿ ಬರುವ ಗಂಗಾವತಿಯಲ್ಲಿ ಸಮ್ಮೇಳನ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.