ADVERTISEMENT

ಕೊಪ್ಪಳ: ಹೆದ್ದಾರಿಯಲ್ಲಿ ದಿಬ್ಬಣದ ಬಸ್‌ ಅಪಘಾತ ಐವರು ಸಾವು

​ಪ್ರಜಾವಾಣಿ ವಾರ್ತೆ
Published 28 ಜನವರಿ 2016, 7:45 IST
Last Updated 28 ಜನವರಿ 2016, 7:45 IST
–ಸಾಂದರ್ಭಿಕ ಚಿತ್ರ
–ಸಾಂದರ್ಭಿಕ ಚಿತ್ರ   

ಕೊಪ್ಪಳ: ಮದುವೆ ದಿಬ್ಬಣಕ್ಕೆ ತೆರಳುತ್ತಿದ್ದ ಬಸ್‌ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿ ಬಾಲಕ ಮತ್ತು ಮಹಿಳೆ ಸೇರಿದಂತೆ ಐದು ಮಂದಿ ಮೃತಪಟ್ಟ ದುರ್ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕು ಮ್ಯಾದನೇರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ –50ರಲ್ಲಿ ಬುಧವಾರ ತಡ ರಾತ್ರಿ ನಡೆದಿದೆ.

ಮೃತರು ಮಹಾರಾಷ್ಟ್ರದ ಅಹಮದ್‌ ನಗರ ಮೂಲದವರು. ಮದುವೆಗೆ ಮೈಸೂರಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಲಾರಿ ಮತ್ತು  ಮಿನಿ ಬಸ್ ಮಧ್ಯೆ ಅಪಘಾತ ಸಂಭವಿಸಿದ್ದು ಒಬ್ಬ ಬಾಲಕ ಹಾಗೂ ಮಹಿಳೆ ಸೇರಿದಂತೆ ದಿಬ್ಬಣಕ್ಕೆ ತೆರಳುತ್ತಿದ್ದ ಐವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಬಾಲಗಕೋಟೆ ಜಿಲ್ಲಾ ಆಸ್ಪತ್ರೆ ಹಾಗೂ ಇಳಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗುರುವಾರ ಮೂಲಗಳು ತಿಳಿಸಿವೆ. ಬೇವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.