
ಪ್ರಜಾವಾಣಿ ವಾರ್ತೆರಾಮನಗರ: ರಾಜ್ಯ ಸರ್ಕಾರದ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳಿಗೆ ವಾರ್ಷಿಕ ₹ 10 ಸಾವಿರದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ
ಮಾಧ್ಯಮಿಕ ಅಥವಾ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಆಸಕ್ತರು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಗೆ ಇದೇ 25ರ ಒಳಗೆ ಅರ್ಜಿ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 99009–89936 ಸಂಪರ್ಕಿಸಬಹುದು ಎಂದು ಇಲಾಖೆಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.