ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಕ್ಷೀಣಿಸಿದ್ದು, ಕರಾವಳಿ ಮತ್ತು ರಾಜ್ಯದ ಒಳನಾಡಿನ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ.
ಮುಂದಿನ 48 ಗಂಟೆ ರಾಜ್ಯದ ಕರಾವಳಿ ಸೇರಿ ದಕ್ಷಿಣ ಒಳನಾಡಿನ ಪಶ್ಚಿಮ ಘಟ್ಟಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಪ್ರದೇಶಗಳಲಿ ಮಳೆಯಾಗಲಿದೆ. ಪಶ್ಚಿಮದಿಂದ ವಾಯುವ್ಯ ಮಾರ್ಗದಲ್ಲಿ 45 ರಿಂದ 55 ಕಿ.ಮೀ.ವೇಗದಲ್ಲಿ ಗಾಳಿ ಬೀಸುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.