ADVERTISEMENT

ಖಾಲಿ ಹುದ್ದೆ ಭರ್ತಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2012, 19:30 IST
Last Updated 17 ಫೆಬ್ರುವರಿ 2012, 19:30 IST

ಮಹದೇವಪುರ:  ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು ಒಂದು ಲಕ್ಷಕ್ಕೂ ಅಧಿಕ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಬೇಕು ಎಂದು ಕರ್ನಾಟಕ ಪದವೀಧರರ ಯುವ ವೇದಿಕೆಯ ರಾಜ್ಯಾಧ್ಯಕ್ಷ ವೈ.ಲಕ್ಷ್ಮೀಪ್ರಸಾದ್ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮಾರತ್‌ಹಳ್ಳಿ ಸಮೀಪದ ಕುಂದಲಹಳ್ಳಿಯಲ್ಲಿ ಇತ್ತೀಚೆಗೆ ವೇದಿಕೆ ಹಮ್ಮಿಕೊಂಡಿದ್ದ ನಿರುದ್ಯೋಗಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ವರ್ಷವೂ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿರುದ್ಯೋಗಿ ಪದವೀಧರರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
 
ಈ ನಿರುದ್ಯೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ಸರ್ಕಾರ ತುರ್ತಾಗಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು. ಒಂದು ವೇಳೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದಿದ್ದಲ್ಲಿ    ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.