ಬೆಂಗಳೂರು: ಪ್ರವಾಹದ ಹಿನ್ನೆಲೆಯಲ್ಲಿ 2009ರಲ್ಲಿ ಜಾರಿಗೊಳಿಸಿದ್ದ ಆರ್ಥಿಕ ಮಿತವ್ಯಯವನ್ನು ಸಡಿಲಗೊಳಿಸಿ ವಿವಿಧ ಇಲಾಖೆಗಳಲ್ಲಿ ಖಾಲಿ ಉಳಿದಿರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ವಿಧಾನಪರಿಷತ್‌ನಲ್ಲಿ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಎ.ಎಚ್. ಶಿವಯೋಗಿಸ್ವಾಮಿ ಅವರ ಆರ್ಥಿಕ ಮಿತವ್ಯಯ ಕುರಿತ ಪ್ರಶ್ನೆಗೆ ಮುಖ್ಯಮಂತ್ರಿ ಈ ಉತ್ತರ ನೀಡಿ, ಈಗಾಗಲೇ ಖಾಲಿ ಉಳಿದಿರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮಕೈಗೊಳ್ಳಲಾಗಿದೆ. ಈ ವರ್ಷ ಪೊಲೀಸ್ ಇಲಾಖೆಯಲ್ಲಿನ 8500 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದರು
ಪ್ರವೇಶ ತೆರಿಗೆ ಕುರಿತು ಸದಸ್ಯ ಮೃತ್ಯುಂಜಯ ಜಿನಗಾ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಸಂಪನ್ಮೂಲ ಸಂಗ್ರಹ ಮಾಡಬೇಕಾಗಿರುವುದರಿಂದ ಪ್ರವೇಶ ತೆರಿಗೆಯನ್ನು ರದ್ದುಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.