ADVERTISEMENT

ಖೇಣಿ ವಿರುದ್ಧ ಸ್ಪರ್ಧೆ: ಅಬ್ರಾಹಂ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2018, 19:30 IST
Last Updated 31 ಮಾರ್ಚ್ 2018, 19:30 IST

ಬೆಂಗಳೂರು: ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಶಾಸಕ ಅಶೋಕ್ ಖೇಣಿ ವಿರುದ್ಧ ಕಣಕ್ಕಿಳಿಯುತ್ತೇನೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಟಿಕೆಟ್ ನೀಡುವಂತೆ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದೇನೆ. ಎರಡೂ ಪಕ್ಷಗಳು ಟಿಕೆಟ್ ನೀಡಲು ನಿರಾಕರಿಸಿದರೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಶತಸಿದ್ಧ ಎಂದರು.

‘ಸಚಿವ ಪ್ರಮೋದ್‌ ಮಧ್ವರಾಜ್, ಆಳಂದ ಶಾಸಕ ಬಿ.ಆರ್.ಪಾಟೀಲ್ ಹಾಗೂ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ವಿರುದ್ಧ ಪ್ರಚಾರ ನಡೆಸುತ್ತೇನೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.