ADVERTISEMENT

ಖ್ಯಾತ ಛಾಯಾಗ್ರಾಹಕ ಕೇಶವ ವಿಟ್ಲ ಇನ್ನಿಲ್ಲ

​ಪ್ರಜಾವಾಣಿ ವಾರ್ತೆ
Published 28 ಮೇ 2018, 4:30 IST
Last Updated 28 ಮೇ 2018, 4:30 IST
ಕೇಶವ ವಿಟ್ಲ
ಕೇಶವ ವಿಟ್ಲ   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಖ್ಯಾತ ಛಾಯಾಗ್ರಾಹಕ ಕೇಶವ ವಿಟ್ಲ ನಿಧನರಾಗಿದ್ದಾರೆ.

ಕಿಡ್ನಿ ಕಾಯಿಲೆಯಿಂದ ಬಳಲುತ್ತಿದ್ದ ಇವರು ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದವರಾದ ಇವರು 'ಮುಂಗಾರು' ಪತ್ರಿಕೆ ಮೂಲಕ ಪತ್ರಿಕಾ ಛಾಯಾಗ್ರಹಣ ಆರಂಭಿಸಿದ್ದರು. ಕ್ಯಾಮೆರಾ ಕಣ್ಣಿನಿಂದ ಹೊಸ ಲೋಕ ತೋರಿಸಿಕೊಟ್ಟಿದ್ದ ಕೇಶವ ವಿಟ್ಲ Facets of Karnataka – A Pictorial Journey ಕೃತಿಯ ಮೂಲಕ ಕರ್ನಾಟಕದ ಹೊಸ ಒಳನೋಟಗಳನ್ನು ಸೆರೆಹಿಡಿದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.