ADVERTISEMENT

ಗಡಿ ಸಮಾವೇಶಕ್ಕೆ ಎಂಇಎಸ್ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2012, 19:30 IST
Last Updated 21 ಏಪ್ರಿಲ್ 2012, 19:30 IST

ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತಾಲ್ಲೂಕು ಹಾಗೂ ಶಹರ ಘಟಕದ ಸಂಯುಕ್ತ ಆಶ್ರಯದಲ್ಲಿ ಮೇ 20 ರಂದು ಯಳ್ಳೂರು ಗ್ರಾಮದ ಮಹಾರಾಷ್ಟ್ರ ಮೈದಾನದಲ್ಲಿ ಗಡಿ ಸಮಾವೇಶ (ಭವ್ಯ ಸೀಮಾ ಮೇಳಾವ್) ಆಯೋಜಿಸಲು ಇತ್ತೀಚೆಗೆ ನಡೆದ ಎಂಇಎಸ್ ಮುಖಂಡರ ಸಭೆ ನಿರ್ಧರಿಸಿದೆ.

ಗಡಿ ಸಮಸ್ಯೆಯನ್ನು ಸುಪ್ರೀಂ ಕೋರ್ಟ್ ಇತ್ಯರ್ಥಪಡಿಸುವವರೆಗೆ ಕರ್ನಾಟಕ ರಾಜ್ಯದ ಗಡಿಯಲ್ಲಿರುವ ಬೆಳಗಾವಿ ಸೇರಿದಂತೆ ಮರಾಠಿ ಭಾಷಿಕ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಲುಒತ್ತಾಯಪಡಿಸುವ ಉದ್ದೇಶದಿಂದ ಈ ಸಮಾವೇಶ ಆಯೋಜಿಸಲು ಎಂಇಎಸ್ ನಿರ್ಧರಿಸಿದೆ.

ಸಮಾವೇಶದ ಪೂರ್ವ ಸಿದ್ಧತೆಗಾಗಿ ಮೇ 9 ರಂದು ಎಂಇಎಸ್ ಸದಸ್ಯರ ಸಭೆ ಕರೆಯಲು ನಿರ್ಧರಿಸಲಾಗಿದ್ದು, ಮಹಾರಾಷ್ಟ್ರದ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್, ಉಪ ಮುಖ್ಯಮಂತ್ರಿ ಅಜಿತ ಪವಾರ್ ಸಮಾವೇಶದಲ್ಲಿ ಭಾಗವಹಿಸುವುದಾಗಿ ಕಿರಣ ಥಾಕೂರ ನೇತೃತ್ವದ ಎಂಇಎಸ್ ನಿಯೋಗಕ್ಕೆ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.