ADVERTISEMENT

ಗುಡುಗು ಸಹಿತ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2018, 19:30 IST
Last Updated 12 ಮಾರ್ಚ್ 2018, 19:30 IST

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡು ಪ್ರದೇಶದಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.

ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ರಾಜ್ಯದಲ್ಲಿ ಒಣಹವೆ ಕಂಡುಬಂದಿದೆ. ಬಳ್ಳಾರಿಯಲ್ಲಿ 38 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ಹಾಗೂ ಮೈಸೂರಿನಲ್ಲಿ 15 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವು ಭಾಗಗಳಲ್ಲಿ ಕನಿಷ್ಠ ಉಷ್ಣಾಂಶ ಒಂದರಿಂದ ಮೂರು ಡಿಗ್ರಿಯಷ್ಟು ಕಡಿಮೆಯಾಗಿದೆ. ಉತ್ತರ ಒಳನಾಡು ಪ್ರದೇಶಗಳಲ್ಲಿ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ ಒಂದು ಡಿಗ್ರಿಯಷ್ಟು ಕುಸಿತವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.