ADVERTISEMENT

ಗುಲಬರ್ಗಾ ವಿಶ್ವವಿದ್ಯಾಲಯದ ಬಿ.ಇಡಿ ಪ್ರಶ್ನೆಪತ್ರಿಕೆ ಸೋರಿಕೆ?

​ಪ್ರಜಾವಾಣಿ ವಾರ್ತೆ
Published 5 ಜೂನ್ 2017, 11:03 IST
Last Updated 5 ಜೂನ್ 2017, 11:03 IST
ಗುಲಬರ್ಗಾ ವಿಶ್ವವಿದ್ಯಾಲಯದ ಬಿ.ಇಡಿ ಪ್ರಶ್ನೆಪತ್ರಿಕೆ ಸೋರಿಕೆ?
ಗುಲಬರ್ಗಾ ವಿಶ್ವವಿದ್ಯಾಲಯದ ಬಿ.ಇಡಿ ಪ್ರಶ್ನೆಪತ್ರಿಕೆ ಸೋರಿಕೆ?   

ಕಲಬುರ್ಗಿ: ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಶೈಕ್ಷಣಿಕ ಸಾಮಗ್ರಿ, ಕೌಶಲ ಮತ್ತು ವಿಧಾನ ವಿಷಯದ ಪ್ರಶ್ನೆಪತ್ರಿಕೆ ಭಾನುವಾರ ರಾತ್ರಿ ಬಹಿರಂಗಗೊಂಡಿದ್ದು ಸೋಮವಾರ ಬೆಳಕಿಗೆ ಬಂದಿದೆ.

ಪ್ರಶ್ನೆ ಪತ್ರಿಕೆ ವಾಟ್ಸ್ ಆಪ್ ನಲ್ಲಿ ಹರಿದಾಡಿದೆ. ಪ್ರಶ್ನೆ ಪತ್ರಿಕೆ ಬಹಿರಂಗಗೊಂಡರೂ ಸೋಮವಾರ ಬೆಳಿಗ್ಗೆ 10 ಗಂಟೆಗೆ   ಪರೀಕ್ಷೆ ನಡೆಸುತ್ತಿರುವುದಕ್ಕೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾನುವಾರ ರಾತ್ರಿಯೇ ಮೌಲ್ಯಮಾಪನ ಕುಲಸಚಿವರಿಗೆ ಬಹಿರಂಗಗೊಂಡ ಪತ್ರಿಕೆಯನ್ನು ವಿದ್ಯಾರ್ಥಿಗಳು ಕಳುಹಿಸಿಕೊಟ್ಟಿದ್ದಾರೆ.

ಕುಲಸಚಿವರ ಪ್ರತಿಕ್ರಿಯೆ:  ಗುಲಬರ್ಗಾ ವಿವಿ ಬಿ.ಇಡಿ ಪ್ರಶ್ನೆ ಪತ್ರಿಕೆ ವಾಟ್ಸಪ್‌ನಲ್ಲಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿ ಮೌಲ್ಯಮಾಪನ ಕುಲಸಚಿವ ಡಾ. ಸಿ.ಎಸ್. ಪಾಟೀಲ್ ಪ್ರತಿಕ್ರಿಯಿಸಿದ್ದು, ಪ್ರಶ್ನೆ ಪತ್ರಿಕೆ ಬಹಿರಂಗಗೊಂಡಿರುವುದನ್ನು ವಿದ್ಯಾರ್ಥಿಗಳು  ಬೆಳಿಗ್ಗೆ 10.30 ಕ್ಕೆ ಗಮನಕ್ಕೆ ತಂದಿದ್ದಾರೆ.

ADVERTISEMENT

ಬಹಿರಂಗಗೊಂಡ ಪ್ರಶ್ನೆ ಪತ್ರಿಕೆ ಮೇಲೆ ವಿವಿ ಬಾರ್‌ಕೋಡ್ ಇಲ್ಲ. ವಿವಿಯ ಪ್ರತಿಯೊಂದು ಪತ್ರಿಕೆಯ ಮೇಲೆ ಬಾರ್‌ಕೋಡ್‌ಗಳಿರುತ್ತವೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೆ ಆತಂಕ ಪಡುವ ಅಗತ್ಯವಿಲ್ಲ ಎಂದು ಮೌಲ್ಯಮಾಪನ ಕುಲಸಚಿವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.