ಗುಲ್ಬರ್ಗ (ಪಿಟಿಐ): ಗುಲ್ಬರ್ಗ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿ 8 ಮಂದಿ ಗಾಯಗೊಂಡಿದ್ದಾರೆ.
ಕೂಡಲಸಂಗಮದಿಂದ ಬರುತ್ತಿದ್ದ ಎಸ್ಯುವಿ (ವ್ಯಾನ್) ವಾಹನವು ಇಲ್ಲಿನ ಮಂಡೆವಾಲ ಹಳ್ಳಿಯ ಸಮೀಪ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ನಾಲ್ವರು ಸಾವನ್ನಪ್ಪಿದರು.
ಗಾಯಗೊಂಡಿದ್ದ ಮಹಿಳೆಯೊಬ್ಬರು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೃತಪಟ್ಟರು. ದುರ್ಘಟನೆಯಲ್ಲಿ 8 ಮಂದಿಗೆ ಗಾಯಗಳಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.