ADVERTISEMENT

ಗುಹಾ ಸೇರಿ 62 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2017, 19:30 IST
Last Updated 30 ಅಕ್ಟೋಬರ್ 2017, 19:30 IST
ಗುಹಾ ಸೇರಿ 62 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ
ಗುಹಾ ಸೇರಿ 62 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ   

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ ದಾಸ್, ಗಾಯಕ ಕೆ.ಜೆ. ಯೇಸುದಾಸ್‌, ಇತಿಹಾಸಕಾರ ರಾಮಚಂದ್ರ ಗುಹಾ, ನಟ ‘ಮುಖ್ಯಮಂತ್ರಿ’ ಚಂದ್ರು, ಸಾಹಿತಿ ವೈದೇಹಿ ಸೇರಿದಂತೆ ವಿವಿಧ ಕ್ಷೇತ್ರಗಳ 62 ಸಾಧಕರಿಗೆ 2017ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುತ್ತಿದೆ.

ಪ್ರಶಸ್ತಿ ಪುರಸ್ಕೃತರಿಗೆ ₹ 1 ಲಕ್ಷ ನಗದು ಹಾಗೂ 20 ಗ್ರಾಂ ಚಿನ್ನದ ಪದಕ ನೀಡಲಾಗುತ್ತದೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನ. 1ರಂದು ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ‍್ರದಾನ ಮಾಡಲಿದ್ದಾರೆ.

‘ವ್ಯಕ್ತಿಗಳ ಸಾಧನೆಯ ಜೊತೆಗೆ ಸಾಮಾಜಿಕ ನ್ಯಾಯ ಮತ್ತು ಜಿಲ್ಲಾವಾರು ಪ್ರಾತಿನಿಧ್ಯಗಳನ್ನು ಪರಿಗಣಿಸಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.

ADVERTISEMENT

ಮಾನದಂಡ ನಿಗದಿಪಡಿಸಿದ್ದ ನಾಗಮೋಹನ ದಾಸ್‌ ಸಮಿತಿ

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಅನುಸರಿಸಬೇಕಾದ ಮಾನದಂಡಗಳನ್ನು ಸಿದ್ಧಪಡಿಸಲು ಹೈಕೋರ್ಟ್‌ ಆದೇಶದ ಅನ್ವಯ ರಾಜ್ಯ ಸರ್ಕಾರ 2016ರಲ್ಲಿ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ ದಾಸ್‌ ನೇತೃತ್ವದ ತಜ್ಞರ ಸಮಿತಿ ರಚಿಸಿತ್ತು.

‘ನನಗೆ ಅರ್ಹತೆ ಇದ್ದರೂ ರಾಜ್ಯೋತ್ಸವ ಪ್ರಶಸ್ತಿ ನೀಡಿಲ್ಲ’ ಎಂದು ದೂರಿ ಸಾಹಿತಿ ಬಿ.ವಿ. ಸತ್ಯನಾರಾಯಣ ಸಲ್ಲಿಸಿದ್ದ ಅರ್ಜಿಯ ಮೇಲೆ ನ್ಯಾಯಾಲಯ ಈ ಆದೇಶ ನೀಡಿತ್ತು. ಸಮಿತಿ ರಚಿಸಿದ ಮಾನದಂಡಗಳನ್ನು ಆಧರಿಸಿ ಸರ್ಕಾರ ಪ್ರಶಸ್ತಿ ಪುರಸ್ಕೃತರನ್ನು ಗುರುತಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.