ADVERTISEMENT

ಗೂಂಡಾ ಕಾಯ್ದೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2012, 19:30 IST
Last Updated 4 ಆಗಸ್ಟ್ 2012, 19:30 IST

ಮಂಗಳೂರು: ನಗರದ ಹೊರವಲಯದ `ಮಾರ್ನಿಂಗ್ ಮಿಸ್ಟ್~ ಹೋಂ ಸ್ಟೇನಲ್ಲಿ `ಬರ್ತ್ ಡೇ ಪಾರ್ಟಿ ಮೇಲೆ ದಾಳಿ ನಡೆಸಿದವರ ವಿರುದ್ಧ ಗೂಂಡಾ ಕಾಯ್ದೆ ಅಡಿ ಕ್ರಮ ಕೈಗೊಳ್ಳುವ ಪ್ರಕ್ರಿಯೆ ಆರಂಭವಾಗಿದೆ~ ಎಂದು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಶನಿವಾರ ಪ್ರಜಾವಾಣಿಗೆ ತಿಳಿಸಿದರು.

ಈ ಘಟನೆ ಸಂಬಂಧ ಇದುವರೆಗೆ 22 ಮಂದಿಯನ್ನು ಬಂಧಿಸಲಾಗಿದೆ. ನಗರದಲ್ಲಿ ಪದೇ ಪದೇ ಯೋಜಿತ ದಾಳಿ ನಡೆಯುತ್ತಿದೆ. ಈ ಹಿಂದೆ ನಡೆದ ದಾಳಿಗಳ ಬಂಧಿತ ಆರೋಪಿಗಳು ಸುಲಭವಾಗಿ ಜಾಮೀನು ಪಡೆದು ಹೊರಬಂದು ಇಂತಹ ದಾಳಿಗಳಲ್ಲಿ ಮತ್ತೆ ತೊಡಗಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ಗೂಂಡಾ ಕಾಯ್ದೆ ಅಡಿ ಕ್ರಮ ಕೈಗೊಳ್ಳಲು ಇಲಾಖೆ ಮುಂದಾಗಿದೆ ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.