ADVERTISEMENT

ಗೃಹ ಸಚಿವ ಸ್ಥಾನಕ್ಕೆ ಜಿ. ಪರಮೇಶ್ವರ್‌ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2017, 9:03 IST
Last Updated 1 ಜೂನ್ 2017, 9:03 IST
ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಅವರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಅವರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.   

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಿ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದ ಬೆನ್ನಲ್ಲೇ ಡಾ.ಜಿ. ಪರಮೇಶ್ವರ್‌ ಅವರು ಗೃಹ ಸಚಿವ ಸ್ಥಾನಕ್ಕೆ ಗುರುವಾರ ರಾಜೀನಾಮೆ ಸಲ್ಲಿಸಿದರು.

ಪರಮೇಶ್ವರ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜಿನಾಮೆ ಪತ್ರ ಸಲ್ಲಿಸಿದರು.

ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ನಡೆಯಲಿರುವ ಚುನಾವಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಎದುರಿಸಲು ನಿರ್ಧರಿಸಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ), ಜಿ.ಪರಮೇಶ್ವರ್‌ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಿ ಬುಧವಾರ ಅಧಿಕೃತ ಆದೇಶ ಹೊರಡಿಸಿತ್ತು.

ADVERTISEMENT

ಪಕ್ಷದ ಹೈಕಮಾಂಡ್‌ ಆದೇಶದಂತೆ ಪರಮೇಶ್ವರ್‌ ಅವರು ಇಂದು ರಾಜೀನಾಮೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.