ಧಾರವಾಡ: ಸರ್ಕಾರಿ ಸ್ವಾಮ್ಯದ ಐದು ಸಂಸ್ಥೆಗಳಿಂದ ಠೇವಣಿ ಸಂಗ್ರಹಿಸಲು ಧಾರವಾಡ ಸಂಸದರ ಕಚೇರಿ ದುರ್ಬಳಕೆ ಮಾಡಿಕೊಂಡು ವೈಯಕ್ತಿಕ ಲಾಭ ಮಾಡಿಕೊಂಡಿರುವ ಆರೋಪದ ಮೇಲೆ ಸಂಸದ ಪ್ರಹ್ಲಾದ ಜೋಶಿ ಅವರ ತಮ್ಮ ಗೋಪಾಲ ಜೋಶಿ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಆರೋಪಿಗೆ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್, ಸಿಬಿಐ ವಿಶೇಷ ನ್ಯಾಯಾಲಯ ಶನಿವಾರ ನಿರೀಕ್ಷಣಾ ಜಾಮೀನು ನೀಡಿದೆ.
ಬಿಡಿಎ, ಬಿಎಂಆರ್‌ಡಿಎ, ಎಲ್‌ಐಸಿ ಸೇರಿದಂತೆ ಹಲವು ಸಂಸ್ಥೆಗಳಿಂದ ತಾವು ಕೆಲಸ ಮಾಡುತ್ತಿದ್ದ ಕೆನರಾ ಬ್ಯಾಂಕಿಗೆ ಠೇವಣಿ ಸಂಗ್ರಹಿಸಲು ಗೋಪಾಲ ಜೋಶಿ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಆರೋಪ ಎದುರಿಸುತ್ತಿದ್ದಾರೆ.
ಪ್ರಕರಣದ ಸಂಬಂಧ ಸಿಬಿಐ ತಮ್ಮನ್ನು ಬಂಧಿಸಬಹುದು ಎನ್ನುವ ಹಿನ್ನೆಲೆಯಲ್ಲಿ ಆರೋಪಿ ಗೋಪಾಲ ಜೋಶಿ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.