ADVERTISEMENT

ಗೋಶಾಲೆ ತೆರೆಯಲು ಸಂಘ ಸಂಸ್ಥೆಗಳಿಗೆ ಗೋಮಾಳ ಭೂಮಿ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2011, 15:30 IST
Last Updated 22 ಫೆಬ್ರುವರಿ 2011, 15:30 IST

ಬೆಂಗಳೂರು: ರಾಜ್ಯದಲ್ಲಿ ಗೋಶಾಲೆಗಳನ್ನು ತೆರೆಯಲು ಮುಂದೆ ಬರುವ ಸಂಘ ಸಂಸ್ಥೆಗಳಿಗೆ ಮಾರುಕಟ್ಟೆ ಮೌಲ್ಯದ ಶೇ 20ರ ದರದಲ್ಲಿ ಗೋಮಾಳ ಭೂಮಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಗೋಶಾಲೆಗಳಿಗೆ ಉಚಿತವಾಗಿ ಭೂಮಿ ನೀಡುವ ಸಂಬಂಧ ಪರ- ವಿರೋಧ ಚರ್ಚೆಯಾಗಿದ್ದು, ಅಂತಿಮವಾಗಿ ಶೇ 20ರ ದರಕ್ಕೆ ಭೂಮಿ ನೀಡಲು ನಿರ್ಧರಿಸಲಾಯಿತು ಎಂದು ಉನ್ನತ ಮೂಲಗಳು ತಿಳಿಸಿವೆ.

ಕೆಲ ಸಚಿವರು ಉಚಿತವಾಗಿ ಭೂಮಿ ನೀಡಬೇಕು ಎಂದು ವಾದಿಸಿದರು. ಆದರೆ ಉಚಿತವಾಗಿ ಭೂಮಿ ನೀಡಿದರೆ ತಪ್ಪು ಸಂದೇಶ ಹೋಗುತ್ತದೆ. ಇದು ಸರಿಯಲ್ಲ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಶೇ 20ರ ದರದಲ್ಲಿ ಭೂಮಿ ನೀಡುವುದು ಸೂಕ್ತ ಎಂದು ಸಲಹೆ ಮಾಡಿದರು. ಅಂತಿಮವಾಗಿ ಇದಕ್ಕೆ ಸಂಪುಟ ಸಭೆ ಸಮ್ಮತಿ ಸೂಚಿಸಿತು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.