ADVERTISEMENT

ಗೌರಿ ಲಂಕೇಶ್ ಹತ್ಯೆ ಪ್ರಕರಣ: 650 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ ಎಸ್‌ಐಟಿ

131 ಸಾಕ್ಷಿಗಳ ಹೇಳಿಕೆ ದಾಖಲು

​ಪ್ರಜಾವಾಣಿ ವಾರ್ತೆ
Published 30 ಮೇ 2018, 9:27 IST
Last Updated 30 ಮೇ 2018, 9:27 IST
ಗೌರಿ ಲಂಕೇಶ್ ಹತ್ಯೆ ಪ್ರಕರಣ:  650 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ ಎಸ್‌ಐಟಿ
ಗೌರಿ ಲಂಕೇಶ್ ಹತ್ಯೆ ಪ್ರಕರಣ: 650 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ ಎಸ್‌ಐಟಿ   

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್‌ಐಟಿ) 650 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಬುಧವಾರ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್‌ಐಟಿ ಆರೋಪ ಪಟ್ಟಿ ಸಲ್ಲಿಸಿದೆ.

ಇದರಲ್ಲಿ 131 ಸಾಕ್ಷಿಗಳ ಹೇಳಿಕೆಗಳನ್ನೂ ದಾಖಲಿಸಲಾಗಿದೆ. ನವೀನ್ ಹಂತಕರಿಗೆ ಗೌರಿ ಅವರ ಮನೆ ಹಾಗೂ ಕಚೇರಿ ತೋರಿಸಿದ್ದ. ಹಂತಕರ ಬಗ್ಗೆ ಆತನಿಗೆ ಪೂರ್ಣ ಮಾಹಿತಿ ಇತ್ತು. ಆದರೆ, ಹಂತಕರ ಹೆಸರುಗಳನ್ನು ಆತ ಹೇಳುತ್ತಿಲ್ಲ.

ADVERTISEMENT

ಸತ್ಯ ಬಯಲಾಗುತ್ತದೆ ಎಂಬ ಕಾರಣಕ್ಕೆ ಆತ ಮಂಪರು ಪರೀಕ್ಷೆಯನ್ನು ಸಹ ನಿರಾಕರಿಸಿದ್ದಾನೆ ಎಂಬ ಅಂಶ ಆರೋಪ ಪಟ್ಟಿಯಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.