ADVERTISEMENT

ಚಂದನದಲ್ಲಿ ಪಿಯುಸಿ ಮಾರ್ಗದರ್ಶಿ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2012, 19:30 IST
Last Updated 17 ಫೆಬ್ರುವರಿ 2012, 19:30 IST

ಬೆಂಗಳೂರು: ಮಾರ್ಚ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಮತ್ತು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ.

ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆಗೆ ಸಹಾಯವಾಗುವ ನಿಟ್ಟಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಪಿಯುಸಿಯ ವಿವಿಧ ವಿಷಯಗಳ ಕುರಿತು `ಚಂದನ~ ವಾಹಿನಿಯಲ್ಲಿ ಶನಿವಾರ ಕಾರ್ಯಕ್ರಮ ಪ್ರಸಾರ ಮಾಡಲಿದೆ.

ಬೆಳಿಗ್ಗೆ 7ರಿಂದ 7.40ರವರೆಗೆ ರಾಜ್ಯಶಾಸ್ತ್ರ, ಮಧ್ಯಾಹ್ನ 1.30ರಿಂದ 2.30ರವರೆಗೆ ಗಣಿತ, 2.30ರಿಂದ 3.30ರವರೆಗೆ ಜೀವವಿಜ್ಞಾನ ಹಾಗೂ ರಾತ್ರಿ 9.30ರಿಂದ 10ರವರೆಗೆ ಗಣಿತ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಗೆ ಪೂರಕವಾದ `ವಿಕಸನ~ ಕಾರ್ಯಕ್ರಮಗಳು ಮಾರ್ಚ್ 11ರವರೆಗೂ ಪ್ರಸಾರವಾಗಲಿದೆ. ಪ್ರತಿದಿನ ಪ್ರಸಾರವಾಗುವ ಕಾರ್ಯಕ್ರಮದ ವೇಳಾಪಟ್ಟಿಯನ್ನು http://kea.kar.nic.in/ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.