
ಪ್ರಜಾವಾಣಿ ವಾರ್ತೆಮಂಡ್ಯ: ಇಲ್ಲಿನ ಕರ್ನಾಟಕ ಸಂಘವು ನೀಡುವ ರಾಜ್ಯ ಮಟ್ಟದ ಡಾ.ಹಾಮಾನಾ ಪ್ರಶಸ್ತಿಗೆ ಈ ಬಾರಿ ಸಾಹಿತಿ ಚಂದ್ರಶೇಖರ ಪಾಟೀಲ (ಚಂಪಾ) ಭಾಜನರಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ 2014ರ ಫೆ. 5ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು ₨ 25 ಸಾವಿರ ನಗದು, ಸರಸ್ವತಿ ವಿಗ್ರಹ ಹಾಗೂ ಪ್ರಶಸ್ತಿಪತ್ರ ಹೊಂದಿದೆ.
ಜಾನಪದ, ಅಂಕಣ, ಭಾಷಾ ವಿಜ್ಞಾನ, ಇತರ ಸಾಹಿತ್ಯ ಪ್ರಕಾರಗಳಲ್ಲಿ ಪ್ರತಿ ವರ್ಷವೂ ಒಂದೊಂದು ಪ್ರಕಾರಕ್ಕೆ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಬಾರಿ ಅಂಕಣ ಸಾಹಿತ್ಯಕ್ಕೆ ಪ್ರಶಸ್ತಿ ನೀಡಲಾಗಿದೆ ಎಂದು ಆಯ್ಕೆ ಸಮಿತಿ ಅಧ್ಯಕ್ಷರೂ ಆದ ಕರ್ನಾಟಕ ಸಂಘ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.