ADVERTISEMENT

ಚನ್ನಪಟ್ಟಣದಲ್ಲಿ ಸ್ಪರ್ಧಿಸುವ ಆಸೆ ಇದೆ: ಅನಿತಾ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2017, 19:30 IST
Last Updated 19 ಅಕ್ಟೋಬರ್ 2017, 19:30 IST
ಚನ್ನಪಟ್ಟಣದಲ್ಲಿ ಸ್ಪರ್ಧಿಸುವ ಆಸೆ ಇದೆ: ಅನಿತಾ ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಸ್ಪರ್ಧಿಸುವ ಆಸೆ ಇದೆ: ಅನಿತಾ ಕುಮಾರಸ್ವಾಮಿ   

ಬೆಂಗಳೂರು: ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಪಬ್ಲಿಕ್ ಟಿವಿಗೆ ಸಂದರ್ಶನ ನೀಡಿರುವ ಅವರು, ‘ಚನ್ನಪಟ್ಟಣದಿಂದ ಸ್ಪರ್ಧಿಸುವ ಆಸೆ ಇದೆ. ಕ್ಷೇತ್ರದ ಜನರೂ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.

‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತಿ ಕಡಿಮೆ ಮತಗಳ ಅಂತರದಿಂದ ಸೋತಿದ್ದೆ. ಈ ಬಾರಿಯೂ ಇಲ್ಲಿಂದಲೇ ಸ್ಪರ್ಧಿಸಬೇಕು ಎಂಬ ಒತ್ತಡವಿದೆ. ಅಂತಿಮವಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ತೀರ್ಮಾನಿಸುತ್ತಾರೆ’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.