
ಪ್ರಜಾವಾಣಿ ವಾರ್ತೆ
ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ಶನಿವಾರ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ರೋಡ್ ಶೋ ನಡೆಸಿದರು.
ಚಳ್ಳಕೆರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರವೀಶ್ ಪರ ನಿಖಿಲ್ ಕುಮಾರ್ ಗೌಡ ಪ್ರಚಾರದಲ್ಲಿ ಪಾಲ್ಗೊಂಡರು.
ಜಾಗ್ವಾರ್ ಸಿನಿಮಾ ಖ್ಯಾತಿಯ ನಟ ನಿಖಿಲ್‌ರನ್ನು ನೋಡಿ ಅಭಿಮಾನಿಗಳು ಹರ್ಷೋದ್ಗಾರ ವ್ಯಕ್ತಪಡಿಸಿದರು. ನಂತರ ಅವರು ಚಳ್ಳಕೆರೆ ನಗರದಲ್ಲೂ ರೋಡ್ ಷೋ ನಡೆಸಿದರು.
ರೋಡ್ ಷೋ ನಂತರ ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಮುತ್ತುರಾಜ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.