ADVERTISEMENT

ಚಿಕಿತ್ಸೆ ಹೊರೆ ಇಳಿಸಲು ಚಿಂತನೆ

​ಪ್ರಜಾವಾಣಿ ವಾರ್ತೆ
Published 16 ಜೂನ್ 2013, 19:59 IST
Last Updated 16 ಜೂನ್ 2013, 19:59 IST

ಗದಗ: `ಗ್ರಾಮೀಣ ಭಾಗದ ಜನರ ವೈದ್ಯಕೀಯ ವೆಚ್ಚದ ಭಾರ ಇಳಿಸುವ ಸಂಬಂಧ ನೀತಿ ರೂಪಿಸಲು ಸರ್ಕಾರ ಚಿಂತನೆ ನಡೆಸಿದೆ' ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ ಭಾನುವಾರ ಇಲ್ಲಿ ಹೇಳಿದರು.

ಐಎಂಎ ರಕ್ತ ಭಂಡಾರ ಕಟ್ಟಡದಲ್ಲಿ `ರಕ್ತ ವಿಭಜನಾ ಘಟಕ' ಉದ್ಘಾಟಿಸಿ ಅವರು ಮಾತನಾಡಿದರು.`ಗ್ರಾಮೀಣ ಜನರಿಗೆ ವೈದ್ಯಕೀಯ ಸೇವೆ ದುಬಾರಿಯಾಗಿದ್ದು, ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆಸ್ಪತ್ರೆಯಿಂದ ಆರ್ಥಿಕ ಭಾರ ಹೊತ್ತುಕೊಂಡು ಹೋಗುತ್ತಿದ್ದಾರೆ.

ಇದನ್ನು ಅರಿತ ಸರ್ಕಾರ ಸಂಬಂಧಪಟ್ಟ ಇಲಾಖೆ ಜತೆ ಚರ್ಚಿಸಿ, ವೈದ್ಯಕೀಯ ವೆಚ್ಚ ಕಡಿಮೆ ಮಾಡುವ ಸಂಬಂಧ ನೀತಿ ರೂಪಿಸುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಎರಡು, ಮೂರು ತಿಂಗಳಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು' ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT