ADVERTISEMENT

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೆ ‘ಕೈ’ ಹಿಡಿದ ಮತದಾರ

​ಪ್ರಜಾವಾಣಿ ವಾರ್ತೆ
Published 15 ಮೇ 2018, 11:03 IST
Last Updated 15 ಮೇ 2018, 11:03 IST
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೆ ‘ಕೈ’ ಹಿಡಿದ ಮತದಾರ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೆ ‘ಕೈ’ ಹಿಡಿದ ಮತದಾರ   

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಐದು ವಿಧಾನಸಭೆ ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಮತದಾರ ಕೈ ಹಿಡಿದು ಗೆಲುವಿನ ನಗೆ ಬೀರಿದ್ದಾರೆ. ‌ಜತೆಗೆ ಚಿಂತಾಮಣಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ, ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಅವರು ಸತತ ಎರಡನೇ ಬಾರಿ ಗೆಲುವು ಸಾಧಿಸಿದ್ದಾರೆ. 

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಡಾ.ಕೆ.ಸುಧಾಕರ್, ಗೌರಿಬಿದನೂರಿನ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಎನ್.ಎಚ್.ಶಿವಶಂಕರರೆಡ್ಡಿ, ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶಾಸಕ ಎಸ್‌.ಎನ್.ಸುಬ್ಬಾರೆಡ್ಡಿ, ಶಿಡ್ಲಘಟ್ಟ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವಿ.ಮುನಿಯಪ್ಪ ಅವರು ಗೆಲುವು ಸಾಧಿಸಿದ್ದಾರೆ. 

ಬಾಗೇಪಲ್ಲಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ, ವಿಧಾನ ಪರಿಷತ್ ಸದಸ್ಯರಾದ ಸಿ.ಆರ್.ಮನೋಹರ್, ಬಿಜೆಪಿ ಅಭ್ಯರ್ಥಿ, ನಟ ಪಿ.ಸಾಯಿಕುಮಾರ್, ಸಿಪಿಎಂ ಅಭ್ಯರ್ಥಿ ಜಿ.ವಿ.ಶ್ರೀರಾಮರೆಡ್ಡಿ, ಚಿಕ್ಕಬಳ್ಳಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಶಿಡ್ಲಘಟ್ಟ ಕ್ಷೇತ್ರದಲ್ಲಿ ಶಾಸಕ, ಪಕ್ಷೇತರ ಅಭ್ಯರ್ಥಿ ಎಂ.ರಾಜಣ್ಣ, ಚಿಂತಾಮಣಿ ಕ್ಷೇತ್ರದಲ್ಲಿ ಭಾರತೀಯ ಪ್ರಜಾ ಪಕ್ಷದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಮುಖಂಡ ಎಂ.ಸಿ.ಸುಧಾಕರ್ ಸೋಲನ್ನಪ್ಪಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.