ADVERTISEMENT

ಚಿಕ್ಕಬಳ್ಳಾಪುರ: ಶಾಂತಿಯುತವಾಗಿ ನಡೆದ ಟಿಪ್ಪು ಜಯಂತಿ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2017, 7:04 IST
Last Updated 10 ನವೆಂಬರ್ 2017, 7:04 IST
ಚಿಕ್ಕಬಳ್ಳಾಪುರದಲ್ಲಿ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಡಾ.ಕೆ.ಸುಧಾಕರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪಿ.ಎನ್‌.ಕೇಶವರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎನ್.ಅನುರಾಧಾ ಭಾಗವಹಿಸಿದ್ದರು.
ಚಿಕ್ಕಬಳ್ಳಾಪುರದಲ್ಲಿ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಡಾ.ಕೆ.ಸುಧಾಕರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪಿ.ಎನ್‌.ಕೇಶವರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎನ್.ಅನುರಾಧಾ ಭಾಗವಹಿಸಿದ್ದರು.   

ಚಿಕ್ಕಬಳ್ಳಾಪುರ: ನಗರದಲ್ಲಿ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ಶಾಸಕ ಡಾ.ಕೆ.ಸುಧಾಕರ್ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪಿ.ಎನ್‌.ಕೇಶವರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎನ್.ಅನುರಾಧಾ ಭಾಗವಹಿಸಿದರು.

ಚಿಂತಾಮಣಿಯಲ್ಲಿ ಜೆಡಿಎಸ್‌ ಶಾಸಕ ಎಂ. ಕೃಷ್ಣಾರೆಡ್ಡಿ ಮತ್ತು ಬೆಂಬಲಿಗರು ಟಿಪ್ಪು ಜಯಂತಿಗೆ ಬಹಿಷ್ಕಾರ ಹಾಕಿದ್ದು ಹೊರತುಪಡಿಸಿದಂತೆ ಜಿಲ್ಲೆಯಲ್ಲಿ ಶುಕ್ರವಾರ ಟಿಪ್ಪು ಜಯಂತಿ ಶಾಂತಿಯುತವಾಗಿ ನಡೆಯಿತು.

ಜಯಂತಿ ಆಚರಣೆಗೆ ರಾಜ್ಯ ಸರ್ಕಾರ ವಿಧಿಸಿರುವ ಷರತ್ತುಗಳ ವಿರೋಧಿಸಿದ ಜೆಡಿಎಸ್‌ ಮುಖಂಡರು, ಎಲ್ಲಾ ಜಯಂತಿಯಂತೆ ಈ ಜಯಂತಿಯಲ್ಲಿ ಕೂಡ ಅದ್ದೂರಿಯಾಗಿ ಮೆರವಣಿಗೆ ಆಯೋಜಿಸಬೇಕಿತ್ತು ಎಂದು ಒತ್ತಾಯಿಸಿದರು. ಚಿಂತಾಮಣಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಕೃಷ್ಣಾರೆಡ್ಡಿ ಭಾಗವಹಿಸಲಿಲ್ಲ.

ADVERTISEMENT

ಜಿಲ್ಲೆಯಲ್ಲಿ ಚಿಂತಾಮಣಿ ಹೊರತುಪಡಿಸಿದಂತೆ ಉಳಿದ ತಾಲ್ಲೂಕುಗಳಲ್ಲಿ ಮೊದಲಿನಿಂದಲೂ ಕೋಮು ಸೌಹಾರ್ದ ವಾತಾವರಣವಿದ್ದು, ಶುಕ್ರವಾರ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.