ಬೆಂಗಳೂರು: ಚಿನ್ನಾಭರಣ ವ್ಯಾಪಾರಿ ನಿತೇಶ್ ಬೇರಾ ಕೊಲೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಕೋಲ್ಕತ್ತಾ, ತಿರುಪತಿ ಮತ್ತು ನಗರದಲ್ಲಿ ಹಲವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಪ್ರಕರಣದ ತನಿಖೆಗೆ ರಚಿಸಿರುವ ವಿಶೇಷ ತಂಡಗಳ ತನಿಖಾಧಿಕಾರಿಗಳು ಕೋಲ್ಕತ್ತಾ ಮತ್ತು ತಿರುಪತಿಗೆ ತೆರಳಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಸಂಬಂಧ ಹಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳನ್ನು ಸದ್ಯದಲ್ಲೇ ಬಂಧಿಸಲಾಗುತ್ತದೆ ಎಂದು ಹಿರಿಯ ಅಧಿಕಾರಿಗಳು `ಪ್ರಜಾವಾಣಿ~ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.