ADVERTISEMENT

ಜನವರಿ ಕೊನೆವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2017, 8:39 IST
Last Updated 10 ಡಿಸೆಂಬರ್ 2017, 8:39 IST
ಮಧುಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ 101 ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
ಮಧುಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ 101 ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು   

ತುಮಕೂರು: ಜನವರಿ ಕೊನೆ ವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾನುವಾರ ಮಧುಗಿರಿಯಲ್ಲಿ ಅಭಿವೃದ್ದಿ ಕಾಮಗಾರಿ ಉದ್ಘಾಟಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.

ಬೇರೆ ಪಕ್ಷದವರು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿಕೊಳ್ಳಲಿ. ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚು. ಹೀಗಾಗಿ ಪಟ್ಟಿ ಪ್ರಕಟಿಸುವಲ್ಲಿ ವಿಳಂಬವಾಗಲಿದೆ ಎಂದರು.

ADVERTISEMENT

ಪರಮೇಶ್ವರ್ ಅವರು ಪಕ್ಷದಿಂದ ಸಮಾವೇಶ ನಡೆಸುತ್ತಿದ್ದಾರೆ. ನಾನು ಸರ್ಕಾರದಿಂದ ಅಭಿವೃದ್ದಿ ಸಮಾವೇಶದಲ್ಲಿ ಭಾಗವಹಿಸುತ್ತಿದ್ದೇನೆ ಎಂದರು.

ಬಿಜೆಪಿ ಪಕ್ಷದ ಪರಿವರ್ತನಾ ಯಾತ್ರೆ ಸಂಪೂರ್ಣ ವಿಫಲವಾಗಿದೆ. ಆದರೆ, ಬಿಜೆಪಿ ಮುಖಂಡರು ಯಶಸ್ವಿಯಾಗಿದೆ ಎಂದು ಹೇಳಿಕೊಳ್ಳುತ್ತಿದ್ದಾರಷ್ಟೇ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.