ADVERTISEMENT

ಜಾಗೃತಿ ಸಮಿತಿ ಯಥಾಸ್ಥಿತಿಯಲ್ಲೇ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2012, 19:30 IST
Last Updated 2 ಫೆಬ್ರುವರಿ 2012, 19:30 IST

ಬೆಂಗಳೂರು: ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆಗೆ ಶಾಸಕರ ಅಧ್ಯಕ್ಷತೆಯಲ್ಲಿರುವ ಜಾಗೃತಿ ಸಮಿತಿಗಳು ಈಗಿರುವಂತೆಯೇ ಮುಂದುವರಿಯಲಿವೆ. ವಿಧಾನ ಪರಿಷತ್ ಸದಸ್ಯರನ್ನು ಸಮಿತಿಯ ಸಹಅಧ್ಯಕ್ಷರನ್ನಾಗಿ ಮಾಡುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಕಾರಜೋಳ, ಕಾನೂನು ಸಚಿವ ಎಸ್. ಸುರೇಶ್‌ಕುಮಾರ್ ಗುರುವಾರ ವಿಧಾನ ಸಭೆಯಲ್ಲಿ ತಿಳಿಸಿದರು.

ಶೂನ್ಯವೇಳೆಯಲ್ಲಿ ಜೆಡಿಎಸ್‌ನ ಸುನಿಲ್ ಹೆಗಡೆ ಮಾಡಿದ ಪ್ರಸ್ತಾವಕ್ಕೆ ಉತ್ತರಿಸಿದ ಕಾರಜೋಳ, ಶಾಸಕರ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ವಿಧಾನ ಪರಿಷತ್ ಸದಸ್ಯರು ಹಸ್ತಕ್ಷೇಪ ಮಾಡುವುದು ಸರಿಯಲ್ಲ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ಸರಿಪಡಿಸುವ ಕೆಲಸ ಮಾಡಲಿದೆ ಎಂದು ಅವರು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.