ಧಾರವಾಡ: ‘ರಾಜ್ಯದಲ್ಲಿ ಶೀಘ್ರದಲ್ಲೇ ಜಾನಪದ ಕಲಾವಿದರ ಗಣತಿ ಪ್ರಕ್ರಿಯೆಗೆ ಚಾಲನೆ ನೀಡುತ್ತೇವೆ’ ಎಂದು ಕರ್ನಾಟಕ ರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷ ಪಿಚ್ಚಳ್ಳಿ ಶ್ರೀನಿವಾಸ್ ಹೇಳಿದರು.
ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಇದುವರೆಗೂ ಜಾನಪದ ಕಲಾವಿದರ ಪಟ್ಟಿ ಮಾಡಿಲ್ಲ. ಜಾನಪದ ವಿವಿಯೂ ಈ ಕೆಲಸ ಮಾಡಿಲ್ಲ ಎಂದರು.
‘ಎಷ್ಟೋ ಬಾರಿ ಕಲಾವಿದರಿಗೆ ಸೇರಬೇಕಾದ ಹಣ ಮಧ್ಯವರ್ತಿಗಳ ಜೇಬಿಗೆ ಹೋಗುವುದನ್ನು ಗಮನಿಸಿದ್ದೇವೆ. ಇದನ್ನು ತಡೆಯಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೇರವಾಗಿ ಕಲಾವಿದರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಬಗ್ಗೆಯೂ ಚಿಂತನೆ ನಡೆಸಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.