ADVERTISEMENT

ಜಿಗ್ನೇಶ್‌ ಮೇವಾನಿ ವಿರುದ್ಧ ಕ್ರಮಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2018, 19:30 IST
Last Updated 7 ಏಪ್ರಿಲ್ 2018, 19:30 IST

ಮಂಡ್ಯ: ಪ್ರಚೋದನಕಾರಿ ಭಾಷಣ ಮಾಡಿರುವ ಗುಜರಾತ್‌ನ ವಡಗಾಂ ಕ್ಷೇತ್ರದ ಶಾಸಕ ಜಿಗ್ನೇಶ್‌ ಮೇವಾನಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಶನಿವಾರ ಜಿಲ್ಲಾ ಚುನಾವಣಾಧಿಕಾರಿ ಎನ್‌.ಮಂಜುಶ್ರೀ ಅವರಿಗೆ ಮನವಿ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಪರ ಪ್ರಚಾರ ಮಾಡಲು ರಾಜ್ಯಕ್ಕೆ ಬಂದಾಗ ಕುರ್ಚಿ ತೂರಿ ಗದ್ದಲ ಎಬ್ಬಿಸಿ ಎಂದು ಪ್ರಚೋದನಾಕಾರಿಯಾಗಿ ಶುಕ್ರವಾರ ಚಿತ್ರದುರ್ಗದಲ್ಲಿ ಹೇಳಿದ್ದಾರೆ. ಅವರು ಜಾತಿ–ಜಾತಿಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಮುಂದೆ ಕಾಂಗ್ರೆಸ್‌ ಪರ ಪ್ರಚಾರ ಮಾಡಲು ಮಂಡ್ಯ ಜಿಲ್ಲೆಗೆ ಬರುವುದನ್ನು ತಡೆಯಬೇಕು. ಜಿಲ್ಲೆಗೆ ಪ್ರವೇಶಿಸಿದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT