ಬೆಂಗಳೂರು: ಬಿಪಿಎಲ್ ಕಾರ್ಡ್‌ದಾರರಿಗೆ ಒಂದು ರೂಪಾಯಿಗೆ ಒಂದು ಕೆಜಿಯಂತೆ 30 ಕೆ ಜಿ ಅಕ್ಕಿ ನೀಡುವ ಯೋಜನೆಯನ್ನು ಜುಲೈ 10ರಿಂದ ಆರಂಭಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ನಗರದಲ್ಲಿ ಬುಧವಾರ ಬೆಂಗಳೂರು ಮಹಾನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿ, ಬೆಂಗಳೂರು ನಗರದಲ್ಲಿ ಜುಲೈ 10ರಂದು ನಡೆಯುವ ಬೃಹತ್ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಕಿ ವಿತರಿಸುವ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರ ಬಡವರಿಗೆ ಆಹಾರ ಧಾನ್ಯಗಳನ್ನು ವಿತರಿಸಲು ಕೇವಲ 1200 ಕೋಟಿ ರೂಪಾಯಿ ನೀಡುತ್ತಿತ್ತು. ಆದರೆ, ಕಾಂಗ್ರೆಸ್ ಸರ್ಕಾರ 4 ಸಾವಿರ ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.