ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿಗೆ ಪಕ್ಷದ ಸಂಸದೀಯ ಮಂಡಳಿ ಸಭೆ ಬುಧವಾರ ಒಪ್ಪಿಗೆ ನೀಡುವ ಸಾಧ್ಯತೆ ಇದೆ.
ಮೊದಲ ಹಂತದಲ್ಲಿ 12 ಅಭ್ಯರ್ಥಿಗಳ ಪಟ್ಟಿಗೆ ಒಪ್ಪಿಗೆ ನೀಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರಿಗೆ ಕಳುಹಿಸಲಾಗಿದೆ. ಎರಡನೇ ಪಟ್ಟಿ ಅಂತಿಮಗೊಂಡ ನಂತರ ಅಧಿಕೃತವಾಗಿ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಶಿವಮೊಗ್ಗಂದ ಗೀತಾ ಶಿವರಾಜ್ಕುಮಾರ್ ಸ್ಪರ್ಧೆ ಮಾಡುವುದು ಖಚಿತವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.