ADVERTISEMENT

ಟಿ.ನಾಗರಾಜ್ ನಿಧನ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2013, 19:59 IST
Last Updated 4 ಸೆಪ್ಟೆಂಬರ್ 2013, 19:59 IST
ಟಿ.ನಾಗರಾಜ್ ನಿಧನ
ಟಿ.ನಾಗರಾಜ್ ನಿಧನ   

ಬೆಂಗಳೂರು: ರಾಜ್ಯ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಹಿರಿಯ ಪತ್ರಕರ್ತ ಟಿ.ನಾಗರಾಜ್ (82) ಅವರು ಬುಧವಾರ ಬೆಳಿಗ್ಗೆ ಇಲ್ಲಿ ಹೃದಯಾಘಾತದಿಂದ ನಿಧನರಾದರು.

ಮೂಲತಃ ಚಿಕ್ಕಬಳ್ಳಾಪುರದ ಬಚ್ಚಹಳ್ಳಿ ಗ್ರಾಮದವರಾದ ನಾಗರಾಜ್, ಪ್ರಜಾವಾಣಿ'  ಪತ್ರಿಕೆಯ ಗ್ರಾಮೀಣ ವಿಭಾಗದಲ್ಲಿ ಉಪ ಸಂಪಾದಕರಾಗಿ ನಿವೃತ್ತಿ ಹೊಂದಿದ್ದರು. ರಾಜ್ಯ ಕಾರ್ಯನಿರತ ಪತ್ರಕರ್ತರ ಒಕ್ಕೂಟ ಹಾಗೂ ರಾಜ್ಯ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ವಾರದ ಹಿಂದೆ ಟ್ರಿನಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.

ನಾಗರಾಜ್ ಅವರ ಮೃತದೇಹವನ್ನು ಬಸವನಗುಡಿಯ ಸೌತ್ ಎಂಡ್ ವೃತ್ತದಲ್ಲಿರುವ ಬೆಂಗಳೂರು ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಅಮೆರಿಕಾದಲ್ಲಿರುವ ಮಗಳು-ಅಳಿಯ ನಗರಕ್ಕೆ ಬಂದ ನಂತರ ಶುಕ್ರವಾರ ವಿಲ್ಸನ್ ಗಾರ್ಡನ್‌ನ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.

ಮೃತರಿಗೆ ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ಪತ್ರಿಕಾ ಅಕಾಡೆಮಿ, ಕೆಂಪೇಗೌಡ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಲಭಿಸಿವೆ. ಮೃತರ ಕುಟುಂಬ ಸದಸ್ಯರ ಸಂಪರ್ಕಕ್ಕೆ 9731506793 ಅಥವಾ 080-26610813. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪತ್ರಕರ್ತರ ಸಹಕಾರ ಸಂಘದ ಸದಸ್ಯರು ನಾಗರಾಜ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.