ADVERTISEMENT

ಟೆಂಡರ್‌ ರದ್ದುಪಡಿಸಿದ್ದೇವೆ: ಸಚಿವ ರಮೇಶ್‌ ಕುಮಾರ್‌

ಆರೋಗ್ಯ ಭಾಗ್ಯ ಯೋಜನೆಗೆ ಫಲಾನುಭವಿ ಹೆಸರು ನೋಂದಣಿ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2017, 19:30 IST
Last Updated 3 ಅಕ್ಟೋಬರ್ 2017, 19:30 IST

ಬೆಂಗಳೂರು: 'ಆರೋಗ್ಯ ಭಾಗ್ಯ ಯೋಜನೆ (ಯುನಿವರ್ಸಲ್‌ ಹೆಲ್ತ್ ಸ್ಕೀಮ್‌)’ಯಲ್ಲಿ ಫಲಾನುಭವಿಗಳ ಹೆಸರು ನೋಂದಣಿ ಮಾಡಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರೆದಿದ್ದ ಅಲ್ಪಾವಧಿ ಟೆಂಡರ್ ಪ್ರಕ್ರಿಯೆಯನ್ನು ರದ್ದುಪಡಿಸಿದ್ದೇವೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್‌.ರಮೇಶ್‌ ಕುಮಾರ್‌ ತಿಳಿಸಿದರು.

‘ಟೆಂಡರ್‌ ಪ್ರಕ್ರಿಯೆ ಬಗ್ಗೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿದ್ದೇನೆ. ಫಲಾನುಭವಿಗಳ ನೋಂದಣಿ ಯಾವ ರೀತಿ ಮಾಡಬೇಕು ಎಂಬ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಸರ್ಕಾರಕ್ಕೆ ಆರ್ಥಿಕವಾಗಿ ಹೊರೆ ಆಗದ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ’ ಎಂದರು.

ತರಾತುರಿಯಲ್ಲಿ ಟೆಂಡರ್‌ ಕರೆದ ಬಗ್ಗೆ ‘ಪ್ರಜಾವಾಣಿ’ ಸೆ. 28ರ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಿತ್ತು.

ADVERTISEMENT

ಕಾರ್ಡ್‌ ನೀಡುವುದನ್ನು ಕೈಬಿಡಲಾಗಿದೆ: ‘ಈ ಯೋಜನೆಗಾಗಿ ಸಾರ್ವತ್ರಿಕ ಆರೋಗ್ಯ ರಕ್ಷಣಾ ಕಾರ್ಡ್‌ ನೀಡುವುದನ್ನು ಕೈಬಿಡಲಾಗಿದೆ. ಸಾರ್ವತ್ರಿಕ ಆರೋಗ್ಯ ರಕ್ಷಣಾ ಯೋಜನೆಗೆ ಆಧಾರ್‌ ಕಾರ್ಡ್‌ಗಳನ್ನು ಮಾತ್ರ ಉಪಯೋಗಿಸಲಾಗುವುದು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್‌ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.