ಬೆಂಗಳೂರು: ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಕ್ಕೂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಬಿ.ಜಿ.ತಿಲಕ್ ಅವರು ಹುದ್ದೆಗೆ ರಾಜೀನಾಮೆ ನೀಡಿರುವುದಕ್ಕೂ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿದರು.
ಬುಧವಾರ ನಗರದಲ್ಲಿ ನಡೆದ ತೆರಿಗೆ ಭವನದ ಉದ್ಘಾಟನಾ ಸಮಾರಂಭದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, `ಬಿ.ಎಸ್. ಯಡಿಯೂರಪ್ಪ ಅವರು ಜಯದೇವ ಹೃದ್ರೋಗ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲಿಯೇ ಆಸ್ಪತ್ರೆಯ ಅಧೀಕ್ಷಕ ಡಾ. ತಿಲಕ್ ಅವರನ್ನು ಎತ್ತಂಗಡಿ ಮಾಡಲಾಗಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ಸರಿಯಲ್ಲ~ ಎಂದರು. ಈ ತಿಂಗಳ 15ರಂದೇ ಡಾ. ತಿಲಕ್ ರಾಜೀನಾಮೆ ಸಲ್ಲಿಸಿದ್ದರು. ವೈದ್ಯಕೀಯ ಶಿಕ್ಷಣ ಸಚಿವರು ಕೂಡ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.