ಬೆಂಗಳೂರು: ಪ್ರಸಕ್ತ ಸಾಲಿನ ‘ಕನಕಶ್ರೀ’ ಪ್ರಶಸ್ತಿಗೆ ವಿಜಾಪುರದ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ಅವರನ್ನು ಆಯ್ಕೆ ಮಾಡಲಾಗಿದೆ.
ದಾಸ ಸಾಹಿತ್ಯ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಹಾಗೂ ಅನನ್ಯ ಕೊಡುಗೆ ಸಲ್ಲಿಸಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನಕಶ್ರೀ’ ಪ್ರಶಸ್ತಿಯನ್ನು ನೀಡುತ್ತಿದೆ.
ಕಾ.ತ. ಚಿಕ್ಕಣ್ಣ ಅವರ ಅಧ್ಯಕ್ಷತೆಯ ಪ್ರಶಸ್ತಿ ಆಯ್ಕೆ ಸಮಿತಿ ಡಾ. ಕುಲಕರ್ಣಿ ಅವರನ್ನು ಆಯ್ಕೆ ಮಾಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.
‘ತಾರ್ ಮಾಸ್ತರ’ ಎಂದೇ ಜನಪ್ರಿಯರಾಗಿರುವ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ಅವರು ಗಮಕದ ಮೂಲಕ ದಾಸ ಸಾಹಿತ್ಯದ ಪ್ರಸಾರ ಕಾರ್ಯ ಮಾಡಿದ್ದಾರೆ ಮತ್ತು 50ಕ್ಕೂ ಹೆಚ್ಚು ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ.
ಪ್ರಶಸ್ತಿಯು ರೂ 5 ಲಕ್ಷ ನಗದು ಹಾಗೂ ಫಲಕ ಒಳಗೊಂಡಿದೆ. ನ. 20ರಂದು ಸಂಜೆ 6ಕ್ಕೆ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.