ರಾಮನಗರ: ಅಕ್ರಮ ಕಲ್ಲು ಗಣಿಗಾರಿಕೆ ಹಾಗೂ ಗ್ರಾನೈಟ್ ದಂಧೆಗೆ ಸಂಬಂಧಿಸಿದಂತೆ ಶಾಸಕ ಡಿ.ಕೆ.ಶಿವಕುಮಾರ್ ಕುಟುಂಬದ ವಿರುದ್ಧ 2007ರಲ್ಲಿ ಅರಣ್ಯ ಇಲಾಖೆ ದಾಖಲಿಸಿದ್ದ ಪ್ರಕರಣಗಳ ಮರು ವಿಚಾರಣೆ ನಡೆಸಲಾಗುವುದು ಎಂದ ಅರಣ್ಯ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.
`ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಸಚಿವರು ಶಿವಕುಮಾರ್ ಕುಟುಂಬದ ವಿರುದ್ಧ ಅರಣ್ಯ ಇಲಾಖೆ 22 ಪ್ರಕರಣಗಳನ್ನು ದಾಖಲಿಸಿತ್ತು. ಈಗ ಈ ಪ್ರಕರಣಗಳ ಬಗ್ಗೆ ವಿಶೇಷ ಒತ್ತು ನೀಡಿ ಮರು ವಿಚಾರಣೆ ಮಾಡಲಾಗುವುದು ಎಂದರು. ಮಧ್ಯಪ್ರದೇಶದಲ್ಲಿ ಕಲ್ಲು ಗಣಿಗಾರಿಕೆಯ ಮಾಫಿಯಾಕ್ಕೆ ಯುವ ಐಪಿಎಸ್ ಅಧಿಕಾರಿಯ ಕೊಲೆಯಾಗಿದೆ. ರಾಮನಗರ, ಕನಕಪುರ ಭಾಗದಲ್ಲೂ ಇದೇ ರೀತಿಯ ವಾತಾವರಣ ಇದೆ. ಅಧಿಕಾರಿಗಳು ನಿರ್ಭೀತಿಯಿಂದ ಕೆಲಸ ಮಾಡಲು ಆಗದ ಸ್ಥಿತಿ ಇದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.