ADVERTISEMENT

ಡಿ.ಕೆ. ಶಿವಕುಮಾರ್‌ಗೆ ಉಪ ಮುಖ್ಯಮಂತ್ರಿ ಸ್ಥಾನ: ಟ್ವಿಟರ್‌ನಲ್ಲಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಮೇ 2018, 11:20 IST
Last Updated 22 ಮೇ 2018, 11:20 IST
ಡಿ.ಕೆ. ಶಿವಕುಮಾರ್‌ (ಸಂಗ್ರಹ ಚಿತ್ರ)
ಡಿ.ಕೆ. ಶಿವಕುಮಾರ್‌ (ಸಂಗ್ರಹ ಚಿತ್ರ)   

ಬೆಂಗಳೂರು: ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್‌ ನಾಯಕ ಡಿ.ಕೆ. ಶಿವಕುಮಾರ್‌ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಹತ್ತಾರು ಮಂದಿ ಟ್ವಿಟರ್‌ನಲ್ಲಿ ಆಗ್ರಹಿಸಿದ್ದಾರೆ. ಇದು #DKS4DCM ಎಂಬ ಹ್ಯಾಷ್‌ಟ್ಯಾಗ್‌ನಡಿ ಟ್ರೆಂಡಿಂಗ್ ಆಗಿದೆ.

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿತ್ತು. ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನೂ ಸ್ವೀಕರಿಸಿದ್ದರು. ಆದರೆ, ವಿಶ್ವಾಸಮತ ಸಾಬೀತುಪಡಿಸುವ ಮೊದಲೇ ಅವರು ರಾಜೀನಾಮೆ ನೀಡಿದ್ದರು. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರನ್ನು ಖರೀದಿ ಮಾಡಲು ಮುಂದಾಗಿದೆ ಎಂಬ ಆರೋಪ ಬಿಜೆಪಿ ವಿರುದ್ಧ ಕೇಳಿಬಂದಿತ್ತು. ಅಂತಹ ಸಂದರ್ಭದಲ್ಲಿ ಪಕ್ಷದ ಶಾಸಕರನ್ನು ರೆಸಾರ್ಟ್‌ನಲ್ಲಿ ಜತೆಯಾಗಿರುವಂತೆ ಮಾಡಿದ್ದಲ್ಲದೆ, ಬಿಜೆಪಿ ಸಂಪರ್ಕಕ್ಕೆ ಸಿಗದಂತೆ ಮಾಡಿ ಬಿಜೆಪಿ ಸರ್ಕಾರ ರಚಿಸದಂತೆ ಮಾಡುವಲ್ಲಿ ಶಿವಕುಮಾರ್ ಪ್ರಮುಖ ಪಾತ್ರವಹಿಸಿದ್ದರು. ಈ ವಿಷಯ, ಚುನಾವಣೆಯಲ್ಲಿ ಭಾರಿ ಅಂತರದ ಗೆಲುವು ಸಾಧಿಸಿರುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಟ್ವಿಟರ್‌ನಲ್ಲಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.

‘ಮಹಾರಾಷ್ಟ್ರ, ಗುಜರಾತ್‌ ಕಾಂಗ್ರೆಸ್‌ ಅನ್ನು ರಕ್ಷಿಸಿದ ಡಿ.ಕೆ.ಎಸ್. ಈಗ ಕರ್ನಾಟಕ ಕಾಂಗ್ರೆಸ್ ಅನ್ನು ರಕ್ಷಿಸಿದ್ದಾರೆ. ಅವರು ಉಪಮುಖ್ಯಮಂತ್ರಿಯಾಗಬೇಕು’ ಎಂದು ಅಲಿ ಖ್ವಿಲ್ ಮಿರ್ಜಾ ಎಂಬುವವರು ಟ್ವೀಟ್ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.