
ಪ್ರಜಾವಾಣಿ ವಾರ್ತೆ
ದೇಶದಲ್ಲಿರುವ ವಿವಿಧ ರಾಜ್ಯಗಳ ಸಚಿವರ ಪೈಕಿ ಯಾರು ಹೆಚ್ಚು ಶ್ರೀಮಂತರು ಎಂಬ ಬಗ್ಗೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸಂಸ್ಥೆ ಅಧ್ಯಯನ ನಡೆಸಿದೆ. ರಾಜ್ಯದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಎರಡನೆಯ ಅತಿ ಶ್ರೀಮಂತ ಸಚಿವ ಎಂದು ಸಂಸ್ಥೆ ಹೇಳಿದೆ.
29 ರಾಜ್ಯಗಳ, ಎರಡು ಕೇಂದ್ರಾಡಳಿತ ಪ್ರದೇಶಗಳ 620 ಮಂತ್ರಿಗಳ ಪೈಕಿ 609 ಜನ ಚುನಾವಣೆ ವೇಳೆ ಸಲ್ಲಿಸಿದ ಪ್ರಮಾಣಪತ್ರವನ್ನು ಪರಿಶೀಲಿಸಿ ಎಡಿಆರ್ ಈ ತೀರ್ಮಾನಕ್ಕೆ ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.