ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ 2017–18ನೇ ಸಾಲಿನ ಪ್ರಥಮ ವರ್ಷದ ಡಿಪ್ಲೊಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜೂನ್ 5ರವರೆಗೆ ವಿಸ್ತರಿಸಲಾಗಿದೆ.
ಈ ಮೊದಲು ಹೊರಡಿಸಿರುವ ಅಧಿಸೂಚನೆಯಲ್ಲಿ ಇದೇ 25 ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಎಂದು ಹೇಳಲಾಗಿತ್ತು. ಹೆಚ್ಚಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅನುಕೂಲ ಆಗುವಂತೆ ದಿನಾಂಕ ವಿಸ್ತರಣೆ ಮಾಡಲಾಗಿದೆ.
ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಮತ್ತು ಮಾಹಿತಿ ಪುಸ್ತಕವನ್ನು http://dte.kar.nic.in ಮತ್ತು kea.kar.nic.in ವೆಬ್‌ಸೈಟ್‌ಗಳಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.