ಬೆಂಗಳೂರು: ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಗಳಲ್ಲಿ ಖುದ್ದಾಗಿ ಭಾಗವಹಿಸಲು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತೀರ್ಮಾನಿಸಿದ್ದಾರೆ.
ಆರಂಭದಲ್ಲಿ ನಾಲ್ಕು ಕಂದಾಯ ವಿಭಾಗಗಳ ತಲಾ ಒಂದು ಜಿಲ್ಲೆಯ ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಕೆಪಿಸಿಸಿ ಅಧ್ಯಕ್ಷರು ಭಾಗವಹಿಸುವರು. ಬೆಳಗಾವಿಯಲ್ಲಿ ಸೆ.18ರಂದು ನಡೆಯುವ ಕಾರ್ಯಕಾರಿಣಿಯಲ್ಲಿ ಅವರು ಭಾಗವಹಿಸುವರು. ನಂತರ ಸೆ.23ರಂದು ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳುವರರು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಸೂಚನೆಯಂತೆ ಪರಮೇಶ್ವರ್ ಜಿಲ್ಲಾ ಸಮಿತಿಗಳ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಮುಂದಾಗಿದ್ದಾರೆ. ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮತಿಯ ಪದಾಧಿಕಾರಿಗಳನ್ನು ಭೇಟಿಮಾಡಿ ಪಕ್ಷ ಸಂಘಟನೆಗೆ ಉತ್ತೇಜಿಸಲು ಈ ಅವಕಾಶವನ್ನು ಬಳಸಿಕೊಳ್ಳಲು ಯೋಚಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.