ಬೆಂಗಳೂರು: ಕರ್ನಾಟಕ ಜನತಾ ಪಕ್ಷದ ನೇತೃತ್ವ ವಹಿಸಲು ಸಜ್ಜಾಗಿರುವ ಬಿ.ಎಸ್.ಯಡಿಯೂರಪ್ಪ ಅವರಿಗೆ ತಿರುಗೇಟು ನೀಡುವ ಉದ್ದೇಶದಿಂದ ಗುಜರಾತ್ ಚುನಾವಣೆ ನಂತರ ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಲು ಬಿಜೆಪಿ ನಾಯಕರು ಗಂಭೀರ ಚಿಂತನೆ ನಡೆಸಿದ್ದಾರೆ.
ಗೊಂದಲಗಳ ನಡುವೆಯೇ ಸರ್ಕಾರ ಮುಂದುವರಿಯಲು ಅವಕಾಶ ನೀಡಿದರೆ, ಯಡಿಯೂರಪ್ಪ ಬೆಂಬಲಿಗ ಸಚಿವರು ವೈಯಕ್ತಿಕವಾಗಿ ಲಾಭ ಪಡೆದುಕೊಳ್ಳುವುದು ಅಷ್ಟೇ ಅಲ್ಲದೆ, ತಮ್ಮ ಸ್ಥಾನ ಬಲದಿಂದ ಕೆಜೆಪಿ ಸಂಘಟನೆಗೂ ಅನುಕೂಲ ಮಾಡಿಕೊಡುತ್ತಾರೆ. ಆದ್ದರಿಂದ ಅಸೆಂಬ್ಲಿ ವಿಸರ್ಜಿಸಬೇಕು ಎಂದು ಸಂಘ ಪರಿವಾರ ಹಿನ್ನೆಲೆಯ ಕೆಲ ಪದಾಧಿಕಾರಿಗಳು ಸಲಹೆ ಮಾಡಿದ್ದಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.