ನವದೆಹಲಿ: ಡೆಂಗೆ ಆರೋಗ್ಯ ಕ್ಷೇತ್ರಕ್ಕೆ ಒಂದು ದೊಡ್ಡ ಸವಾಲಾಗಿದ್ದು, ಈ ಪಿಡುಗು ನಿವಾರಣೆಗೆ ಸಮರ್ಪಕ ಔಷಧ ಮತ್ತು ಚಿಕಿತ್ಸಾ ಕ್ರಮಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ- ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಹೆಚ್ಚು ಹೆಚ್ಚು ಸಂಶೋಧನೆಗಳನ್ನು ಕೈಗೊಳ್ಳುವುದು ಅವಶ್ಯ ಎಂದು ರಾಜ್ಯದ ಆರೋಗ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು.
ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಏರ್ಪಡಿಸಿದ್ದ ಎರಡು ದಿನಗಳ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆಗಳ ಸಚಿವರ ಸಭೆಯಲ್ಲಿ ಮಾತನಾಡಿ, ಡೆಂಗೆನಂಥ ಕಾಯಿಲೆಗಳ ತಪಾಸಣೆ ನಡೆಸಲು ತಾಲ್ಲೂಕು ಮತ್ತು ಜಿಲ್ಲಾ ಮಟ್ಟಗಳಲ್ಲಿ ಇನ್ನೂ ಹೆಚ್ಚಿನ ಪ್ರಯೋಗಾಲಯಗಳ ವ್ಯವಸ್ಥೆ ಕಲ್ಪಿಸಲು ರಾಜ್ಯದ ಜತೆ ಕೇಂದ್ರವೂ ಕೈಜೋಡಿಸಬೇಕು ಎಂದರು.
ನಗರ ಆರೋಗ್ಯ ಮಿಷನ್ ಸ್ಥಾಪಿಸಿ ಮತ್ತಷ್ಟು ಆರೋಗ್ಯ ಕಾರ್ಯಕ್ರಮಜಾರಿಗೊಳಿಸಿದರೆ ದೀರ್ಘಕಾಲೀನ ಪ್ರಯೋಜನವಾಗಲಿದೆ ಎಂದರು. ಕೇಂದ್ರದ ಆರೋಗ್ಯ ಸಚಿವ ಗುಲಾಂ ನಬಿ ಆಜಾದ್ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ವಿವಿಧ ರಾಜ್ಯಗಳ ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.