ADVERTISEMENT

ತಮಿಳುನಾಡು ದ್ವೇಷ ರಾಜಕಾರಣ‌

ಸಚಿವ ಟಿ.ಬಿ. ಜಯಚಂದ್ರ ಆರೋಪ

​ಪ್ರಜಾವಾಣಿ ವಾರ್ತೆ
Published 9 ಜೂನ್ 2015, 19:30 IST
Last Updated 9 ಜೂನ್ 2015, 19:30 IST
ತಮಿಳುನಾಡು ದ್ವೇಷ ರಾಜಕಾರಣ‌
ತಮಿಳುನಾಡು ದ್ವೇಷ ರಾಜಕಾರಣ‌   

ಬೆಂಗಳೂರು: ತಮಿಳುನಾಡು ಸರ್ಕಾರ ರಾಜ್ಯದ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ಆರೋಪಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾವೇರಿ ನೀರು ಮಾಲಿನ್ಯ ವಿಚಾರ ಮುಂದಿಟ್ಟುಕೊಂಡು ತಮಿಳುನಾಡು ಸರ್ಕಾರ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ದೂರು ನೀಡಿದೆ. ಅಲ್ಲಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಬಂದಿದೆ. ಸುಪ್ರೀಂಕೋರ್ಟ್‌ನಲ್ಲೂ ಅರ್ಜಿ ಸಲ್ಲಿಸಿದೆ. ಇನ್ನೂ ನೋಟಿಸ್‌ ಬಂದಿಲ್ಲ. ಆದರೆ, ಇದರ ವಿರುದ್ಧ ಕಾನೂನಿನ ಹೋರಾಟ  ನಡೆಸುತ್ತೇವೆ’ ಎಂದರು.

‘ರಾಜ್ಯ ತಮಿಳುನಾಡಿನೊಂದಿಗೆ ಸಂಘರ್ಷಕ್ಕೆ ಇಳಿದಿಲ್ಲ. ದ್ವೇಷ ರಾಜಕಾರಣವನ್ನೂ ಮಾಡುತ್ತಿಲ್ಲ. ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೋರ್ಟ್‌ ಆದೇಶದನ್ವಯ  ಮೊಕದ್ದಮೆ ಹೂಡಲು ನಿರ್ಧರಿಸಿತ್ತು’ ಎಂದರು.

* ತಮಿಳುನಾಡು ಸರ್ಕಾರ ದ್ವೇಷದ ವರ್ತನೆ ತೋರುತ್ತಿದೆ. ಒಂದಿಲ್ಲೊಂದು ಕಾರಣಕ್ಕೆ ರಾಜ್ಯದ ವಿರುದ್ಧ ತಕರಾರು ತೆಗೆಯುತ್ತಲೇ ಇದೆ. ಈಗ ಕಾವೇರಿ ನೀರಿನ ಮಾಲಿನ್ಯ ಪ್ರಸ್ತಾಪಿಸಿ ಜಗಳಕ್ಕೆ ಬಂದಿದೆ.
-ಟಿ.ಬಿ. ಜಯಚಂದ್ರ, ಕಾನೂನು ಸಚಿವ

ಗ್ರಾಮೀಣ ಸೇವೆ 2 ವರ್ಷ?
ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಪಡೆದವರು  ಗ್ರಾಮೀಣ ಭಾಗಗಳಲ್ಲಿ ಕನಿಷ್ಠ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ಚಿಂತನೆ ನಡೆದಿದೆ ಎಂದು ಸಚಿವ ಜಯಚಂದ್ರ ಹೇಳಿದರು.

‘ಕರ್ನಾಟಕದಲ್ಲಿ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತರಬೇತಿ ಮಸೂದೆ–2012ನ್ನು ಮಂಗಳವಾರ  ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.